ಮೈಸೂರು: ಪದೇ ಪದೇ ಉಮೇಶ್ ಕತ್ತಿ ಲೋಫರ್, ಲಫಂಗ ಅನ್ನೋ ಬದಲು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಲಿ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಉಮೇಶ್ ಕತ್ತಿ ಕಿಡಿಕಾರಿದ್ದಾರೆ.
ಪ್ರತ್ಯೇಕ ರಾಜ್ಯ ಹೇಳಿಕೆಗೆ ಕಾಂಗ್ರೆಸ್ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯಗೆ ಮಾಡೋಕೆ ಕೆಲಸ ಇಲ್ಲ. ಪದೇ ಪದೇ ಉಮೇಶ್ ಕತ್ತಿ ಲೋಫರ್, ಲಫಂಗ ಅನ್ನೋ ಬದಲು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಲಿ. ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಚಿಂತನೆ ಇಲ್ಲ.
ಹಿಂದೆ ಪಾದಯಾತ್ರೆ ಮಾಡಿ, ಆಲಮಟ್ಟಿ ಅಭಿವೃದ್ಧಿ ಮಾಡುತ್ತೇವೆ ಅಂದ್ರು, ಮಾಡಿದ್ರಾ? ಕಾಂಗ್ರೆಸ್ ಅವಧಿಯಲ್ಲೇ ಉತ್ತರ ಕರ್ನಾಟಕ ಅಭಿವೃದ್ಧಿ ಆಗಿಲ್ಲ. ಸುಮ್ಮನೆ ಇಲ್ಲ-ಸಲ್ಲದ ಮಾತುಗಳನ್ನು ಆಡಿದ್ರೆ ನಾವೂ ಕೂಡ ತಿರುಗೇಟು ನೀಡ್ತೆವೆ. ಪ್ರತ್ಯೇಕ ರಾಜ್ಯವನ್ನ ಜನ ಬಯಸಿದ್ದಾರೆ. ಜನರ ಮನವಿಗೆ ಸ್ಪಂದಿಸುವ ಕೆಲಸವನ್ನು ನಾವು ಮಾಡಬೇಕು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





