ಹೊಸಪೇಟೆ (ವಿಜಯನಗರ): ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಕೊಲೆ ಖಂಡಿಸಿ ಜುಲೈ 2ರಂದು ಹೊಸಪೇಟೆ ಬಂದ್ ನಡೆಸಲು ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಬಂದ್ ಗೆ ಬೆಂಬಲಿಸಬೇಕೆಂದು ಶ್ರೀರಾಮ ಸೇನೆ ತಾಲ್ಲೂಕು ಅಧ್ಯಕ್ಷ ಜಗದೀಶ್ ಕಮಾಟಗಿ ತಿಳಿಸಿದರು.
ಅಂದು ಬೆಳಿಗ್ಗೆ ನಗರದ ಪಾದಗಟ್ಟೆ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಅನಂತರ ರಾಷ್ಟ್ರಪತಿಗಳ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.
ಬಂದ್ ಒತ್ತಾಯಪೂರ್ವಕವಾಗಿ ಮಾಡುವುದಿಲ್ಲ. ಇದೊಂದು ಅಮಾನವೀಯ ಕೃತ್ಯವಾಗಿದ್ದು, ಹಿಂದೂ ಸಮಾಜದವರು ಸ್ವಯಂಪ್ರೇರಣೆಯಿಂದ ಭಾಗವಹಿಸಿ ಬೆಂಬಲ ಸೂಚಿಸಬೇಕೆಂದು ಮನವಿ ಮಾಡಿದರು. ಬಂದ್ ನಲ್ಲಿ ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ, ವಿಭಾಗೀಯ ಅಧ್ಯಕ್ಷ ಸಂಜೀವ್ ಮರಡಿ ಪಾಲ್ಗೊಳ್ಳುವರು. ವಿವಿಧ ಹಿಂದೂಪರ, ಕನ್ನಡಪರ ಸಂಘಟನೆಗಳ ಬೆಂಬಲ ಕೋರಲಾಗಿದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





