ಬೆಂಗಳೂರು: ಆಗಸ್ಟ್ 12ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ ಅವರ ಜನುಮ ದಿನದ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ. ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯನವರ ಬೆಂಬಲಿಗರು ಸಿದ್ದರಾಮೋತ್ಸವ ಎಂದು ಹೆಸರಿಟ್ಟಿದ್ದಾರೆ.ಇದಕ್ಕೆ ಇದೀಗ ಬಿಜೆಪಿ ವ್ಯಂಗ್ಯವಾಡಿದೆ.
ಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ವಿರುದ್ಧ ಬಿಜೆಪಿ ವ್ಯಂಗ್ಯದ ಟ್ವೀಟ್ ಮಾಡಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಮುಖ್ಯಮಂತ್ರಿ ಪದವಿಯ ಆಸೆಗಾಗಿ ಸಿದ್ದರಾಮಯ್ಯ ತಮ್ಮ ಹಳೆಯ ಅಹಿಂದ ಕಾರ್ಡ್ ಬಳಸುತ್ತಿದ್ದಾರೆ. ಅಹಿಂದ ಕಾರ್ಡ್ ಎಕ್ಸ್‌ಪೈರ್ ಆಗಿದೆ. ಕಳೆದ ಬಾರಿ ಇದೇ ಕಾರ್ಡ್ ತೋರಿಸಿ ಮೋಸ ಮಾಡಿದ್ದನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ. ಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಟೀಕಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





