Breaking News

ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ಸಂಚಾರ ರದ್ದು


ಮಂಗಳೂರು: ಭಾರಿ ಮಳೆಯಿಂದಾಗಿ ಮಂಗಳೂರು ಪಡೀಲ್ ಜಂಕ್ಷನ್ ವಿಭಾಗದ ರೈಲ್ವೆ ಹಳಿ ಮೇಲೆ ಪಕ್ಕದ ಧರೆ ಕುಸಿದು ಮಣ್ಣು ಹಳಿ ಮೇಲೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಇದರಿಂದ ಈ ಭಾಗದಲ್ಲಿ ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ ರೈಲು ಸುಬ್ರಹ್ಮಣ್ಯ ಮಂಗಳೂರು ಸೆಂಟ್ರಲ್ ಹಾಗೂ ರೈಲು ಮಂಗಳೂರು ಸೆಂಟ್ರಲ್ ಸುಬ್ರಹ್ಮಣ್ಯ ರೋಡ್ ಅನ್ ರಿಸರ್ವ್ಡ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಲ್ಲಿನ ಸಂಚಾರ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣ್ಣು ತೆರವು ಕಾರ್ಯ ಭರದಿಂದ ಸಾಗಿದ್ದು ಸಂಜೆ ಸುಮಾರಿಗೆ 5ಗಂಟೆ ವೇಳೆಗೆ ಹಳಿಯು ಸಂಚಾರ ಮುಕ್ತವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *