ಹುಬ್ಬಳ್ಳಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತಿ ರಾಜ್ಯ ಸಚಿವನಾಗಿ ಕಾನೂನು ಹಾಗೂ ಶಿಕ್ಷಣ ಸಚಿವನಾಗಿ ಅನೇಕ ಕೆಲಸ ಮಾಡಿ ವಿಧಾನ ಪರಿಷತ್ ಸಭಾಪತಿಯಾಗಿ ಸಹ ಉತ್ತಮ ಕೆಲಸ ಮಾಡಿದ್ದ ತೃಪ್ತಿ ಇದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಎಂಟನೇ ಭಾರಿಗೆ ವಿಧಾನ ಪರಿಷತ್ ಆಯ್ಕೆ ದೇಶದಲ್ಲಿಯೇ ದಾಖಲೆ ಮಾಡಿರುವ ಬಸವರಾಜ ಹೊರಟ್ಟಿ ಅವರು ಶುಕ್ರವಾರ ಹುಬ್ಬಳ್ಳಿ ಪತ್ರಿಕಾ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದರು.
ನಾನು ಶಿಕ್ಷಕ ಪ್ರತಿನಿಧಿಯಾಗಿ ಅನೇಕ ಶಿಕ್ಷಣ ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದನೆ ಮಾಡಿದ್ದೇನೆ ಇನ್ನು ಅನೇಕ ಸಮಸ್ಯೆಗಳೂ ಇವೆ ಅವುಗಳನ್ನ ಸಹ ಪ್ರಾಧ್ಯನ್ಯತೆ ಅನುಸಾರವಾಗಿ ಬಗೆಹರಿಸಲು ಮುಂದಾಗುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಭರವಸೆ ನೀಡಿದರು.
ನಾನು ಈಗಾಗಲೇ ರಾಜ್ಯ ಸರ್ಕಾರ 1995–2000ದ ಅವಧಿಯಲ್ಲಿ ಆರಂಭಗೊಂಡ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಕಾಲ್ಪನಿಕ ವೇತನ ಜಾರಿಗೊಳಿಸಬೇಕು ಹಾಗೂ ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಹಿಂದಿನ ಪದ್ಧತಿಯನ್ನೇ ಅನುಸರಿಸಬೇಕು. ಈ ಬೇಡಿಕೆಗಳನ್ನು ಜುಲೈ 15ರೊಳಗೆ ಈಡೇರಿಸಲು ಸಹ ಗಡವು ಸಹ ನೀಡಿದ್ದು ಇಲ್ಲದಿದ್ದರೆ, ಶಿಕ್ಷಕರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸುತ್ತೇನೆ.‘ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದಾಗಿ ಹೇಳಿದ್ದ ಸರ್ಕಾರ ವಿಳಂಬ ಮಾಡುತ್ತಲೇ ಬಂದಿದೆ. ಈಗಲಾದರೂ ಬೇಡಿಕೆ ಈಡೇರಿಸಬೇಕು. ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣದ ಹೆಸರಿನಲ್ಲಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಹಾಗಾಗಿ, ಹಳೇ ಪದ್ಧತಿಮುಂದುವರಿಸಬೇಕು. 2006ರಿಂದ ನೇಮಕವಾದ ಶಿಕ್ಷಕರಿಗೆ ಹಳೇ ಪಿಂಚಣಿ ಪದ್ಧತಿಯನ್ನೇ ಮುಂದುವರಿಸಬೇಕು. ಈ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಲಾಗುವುದು’ ಎಂದು ಹೇಳಿದರು.
‘ಪಠ್ಯ ಪುಸ್ತಕ ಪೂರೈಕೆ ವಿಳಂಬವು ಮಕ್ಕಳ ಕಲಿಕೆ ಮೇಲೆ ಪರಿಣಾಮ ಬೀರುತ್ತಿದೆ. ಸರ್ಕಾರ ಈ ವಿಷಯವನ್ನು ಡಿಎಸ್‌ಇಆರ್‌ಟಿ ತಜ್ಞರಿಗೆ ವಹಿಸಬೇಕು. ಅದಕ್ಕಾಗಿ, ದೃಢ ನಿರ್ಧಾರ ಕೈಗೊಳ್ಳಬೇಕು’ ಎಂದರು. ಪಠ್ಯ ಪುಸ್ತಕ ಪೂರೈಕೆ ವಿಳಂಬವು ಮಕ್ಕಳ ಕಲಿಕೆ ಮೇಲೆ ಪರಿಣಾಮ ಬೀರುತ್ತಿದೆ. ಸರ್ಕಾರ ಈ ವಿಷಯವನ್ನು ಡಿಎಸ್‌ಇಆರ್‌ಟಿ ತಜ್ಞರಿಗೆ ವಹಿಸಬೇಕು. ಅದಕ್ಕಾಗಿ, ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಹೊರಟ್ಟಿ ಪ್ರತಿಕ್ರಿಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





