Breaking News

ಜುಲೈ. 5ರವರೆಗೆ ಗುಡುಗು ಸಹಿತ ಧಾರಾಕಾರ ಮಳೆ


ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಜುಲೈ 5ರವರೆಗೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಒಟ್ಟು ಏಳು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜುಲೈ 5ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಲಿದೆ. ಈ ಪೈಕಿ ಜುಲೈ 1ರಂದು ಕರಾವಳಿ ಭಾಗದಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಈ ಮೂರು ಜಿಲ್ಲೆಗಳಿಗೆ ಶುಕ್ರವಾರ ಒಂದು ದಿನ ಮಾತ್ರ ಆರೆಂಜ್ ಅಲರ್ಟ್ ನೀಡಲಾಗಿದೆ. ಸಮುದ್ರ ತೀರ ಪ್ರದೇಶಲ್ಲಿ ದೈತ್ಯ ಅಲೆಗಳು ದಡಕ್ಕೆ ಬಂದು ಅಪ್ಪಳಿಸುವ ಸಾಧ್ಯತೆ ಇದೆ. ಇಲ್ಲಿ ಪ್ರತಿ ಗಂಟೆಗೆ ಗಾಳಿಯು ಸುಮಾರು 30-40 ಕಿ. ಮೀ.ನಷ್ಟು ವೇಗವಾಗಿ ಬೀಸಲಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *