Breaking News

ನಮ್ಮ ಪಕ್ಷವನ್ನು ಯಾರು ತುಳಿಯಲು ಪ್ರಯತ್ನಿಸುತ್ತಾರೂ ಅವರ ವಿರುದ್ಧ ಶತಾಯ ಗತಾಯ ಹೋರಾಟ


ಬೆಂಗಳೂರು : ನಮ್ಮ ಪಕ್ಷವನ್ನು ಯಾರು ತುಳಿಯಬೇಕು ಎಂದು ಪ್ರಯತ್ನ ಮಾಡಿದ್ದರೋ ಅವರ ವಿರುದ್ಧ ಶತಾಯ ಗತಾಯ ಹೋರಾಟ ಮಾಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು.

ಜೆಪಿ ಭವನದಲ್ಲಿಂದು ಜನತಾಮಿತ್ರ ಜನ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಸುಮ್ಮನೆ ಕೂರುವುದಿಲ್ಲ. ಕೂರಲು ಏಳಲು ಆಗುವುದಿಲ್ಲ ಎಂದು ಹಾಸ್ಯ ಮಾಡುವರಿಗೆ ನಾನು ಹೋರಾಟದ ಮೂಲಕ ಉತ್ತರ ಕೊಡುತ್ತೇನೆ ಎಂದರು.

ಮೊದಲು ಜಲಧಾರೆ ಕಾರ್ಯಕ್ರಮ ಆಯಿತು. ಈಗ ಜನಮಿತ್ರ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರಿಗೆ ಏನೇನು ಮಾಡಿದ್ದೇನೆ ಎಂಬುದನ್ನು ಹೇಳುವ ಕಾಲ ಬರುತ್ತದೆ. ಈ ದೇವೇಗೌಡ ಹಳ್ಳಿ ರೈತನ ಮಗ. ಕೆಲವರು ಏನು ಮಾಡಲು ಆಗುತ್ತದೆ ಎಂದು ಕುಹಕವಾಡಿದ್ದಾರೆ. ನಮ್ಮ ಪಕ್ಷಕ್ಕೆ ಶಕ್ತಿ ಇಲ್ಲ ಅಂತಾ ಅಪಹಾಸ್ಯ ಮಾಡುತ್ತಾರೆ. ನಮ್ಮ ಶಕ್ತಿ ಏನು ಅನ್ನೋದನ್ನು ಸಾಬೀತುಪಡಿಸುತ್ತೇನೆ ಸವಾಲು ಹಾಕಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *