ನವದೆಹಲಿ : ದೈನಂದಿನ ಕೇಸ್ ಗಳ ಸಂಖ್ಯೆ ಹೆಚ್ಚಾಗ್ತಿದೆ.. ಕಳೆದ 24 ಗಂಟೆಗಳಲ್ಲಿ 17,070 ಹೊಸ ಪ್ರಕರಣಗಳು ವರದಿಯಾಗಿದ್ದು, 23 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 1.07 ಲಕ್ಷಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 4 ಕೋಟಿ 34 ಲಕ್ಷಕ್ಕೆ ತಲುಪಿದೆ. ಈ ಪೈಕಿ 4 ಕೋಟಿ 28 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ. ಕೋವಿಡ್‌ನಿಂದಾಗಿ ಇದುವರೆಗೆ 5,25,139 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 14,413 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.. ದೈನಂದಿನ ಸೋಂಕು ಪಾಸಿಟಿವಿಟಿ ರೇಟ್ ಶೇ 3.40 ರಷ್ಟು ಏರಿದೆ..
bigtvnews | Hubli Dharwad News | Kannada News | Karnataka News Hubli News | News In Hubli | Local news





