ಶಿವಮೊಗ್ಗ : ಜಿಲ್ಲೆಯ ಉಂಬ್ಳೇಬೈಲು ಸಮೀಪ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಸರಕಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಅವಘಡದಲ್ಲಿ 40 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಖಾಸಗಿ ಬಸ್ ಚಾಲಕನ ಸ್ಥಿತಿ ಗಂಭೀರ ವಾಗಿದೆ ಎಂದು ತಿಳಿದು ಬಂದಿದೆ.
ಚಾಲಕ ಶ್ರೀಧರ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಂಬ್ಳೇಬೈಲು ಸಮೀಪದ ತೋಟದಕೆರೆ ಕ್ರಾಸ್ ಬಳಿ ನಡೆದ ಘಟನೆಯಲ್ಲಿ ಎರಡು ಬಸ್ ಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಶಿವಮೊಗ್ಗದಿಂದ ಎನ್ ಆರ್ ಪುರ, ಕೊಪ್ಪ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್, ಎನ್ ಆರ್ ಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ನಡುವೆ ಅವಘಡ ಸಂಭವಿಸಿದೆ. ಗಾಯಾಳುಗಳು ಶಿವಮೊಗ್ಗದ ಮೆಗ್ಗಾನ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಖಾಸಗಿ ಬಸ್ ನಲ್ಲಿ 35 ಕ್ಕೂ ಹೆಚ್ಚು ಹಾಗೂ ಸರ್ಕಾರಿ ಬಸ್ ನಲ್ಲಿ 45 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





