ಹುಬ್ಬಳ್ಳಿ: ನವವಿವಾಹಿತೆಯೊಬ್ಬಳನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾರ್ಪೋರೆಟರ್ ವಿರುದ್ಧ ಕೋರ್ಟ್ ಅರೆಸ್ಟ್ ವಾರೆಂಟ್ ಮಾಡಿದ ಬೆನ್ನಲ್ಲೇ ಪೊಲೀಸರು ಕಾರ್ಪೊರೇಟರ್ ಚೇತನ ಹಿರೇಕೇರೂರನನ್ನು ಬಂಧಿಸಿದ್ದಾರೆ.
ನವವಿವಾಹಿತೆ ಸಹನಾ ಎಂಬುವವರನ್ನು ಅಪಹರಣ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ನಿಖಿಲ್ ದಾಂಡೇಲಿ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಎಫ್ ಐ ಆರ್ ಆಗಿದ್ದರೂ ಕೂಡ ಪೊಲೀಸರು ಯಾವುದೇ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ನಿಖಿಲ್ ದಾಂಡೇಲಿ ಹಾಗೂ ಸಹನಾ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ಪರಿಶೀಲನೆ ನಡೆಸಿದ ಕೋರ್ಟ್ ಐವರ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಾರ್ಪೋರೆಟರ್ ಚೇತನ ಹಿರೇಕೇರೂರ, ಶಿವು ಹಿರೇಕೇರೂರ ಹಾಗೂ ಲಕ್ಷ್ಮೀ ಹಿರೇಕೇರೂರ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





