ಧಾರವಾಡ ಜು.02: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಧಾರವಾಡದಲ್ಲಿ ಆಚರಿಸುತ್ತಿರುವ ಡಾ.ಫ.ಗು.ಹಳಕಟ್ಟಿ ಅವರ ಜನ್ಮ ದಿನಾಚರಣೆಯ ರಾಜ್ಯ ಮಟ್ಟದ ಕಾರ್ಯಕ್ರಮ ನಿಮಿತ್ಯ ಹಮ್ಮಿಕೊಂಡಿರುವ ಡಾ.ಫ.ಗು.ಹಳಕಟ್ಟಿ ಅವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಮಹಾಪೌರ ಈರೇಶ ಅಂಚಟಗೇರಿ ಹಾಗೂ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಚಾಲನೆ ನೀಡಿದರು.
ಮೆರವಣಿಗೆಯು ಡಾ.ಫ.ಗು.ಹಳಕಟ್ಟಿ ಅವರ ಹುಟ್ಟಿದ ಮನೆ ಧಾರವಾಡ ಹೊಸಯಲ್ಲಾಪುರದ ಶುಕ್ರವಾರಪೇಟೆಯಲ್ಲಿರುವ ಮನೆ ವಚನ ದಿಂದ ಇಂದು ಬೆಳಿಗ್ಗೆ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪಣೆ ಮಾಡುವ ಮೂಲಕ ಗಣ್ಯರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಸಹಾಯಕ ನಿರ್ದೇಶಕ ಕುಮಾರ ಬೆಕ್ಕೆರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು ಡಾ.ಫ.ಗು.ಹಳಕಟ್ಟಿ ಅವರ ಅಭಿಮಾನಿಗಳು, ಬಸವ ಕೇಂದ್ರದ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.
ಮೆರವಣಿಗೆಯಲ್ಲಿ ಕರಡಿ ಮಜಲು, ಮಹಿಳೆಯರ ಡೊಳ್ಳು ಕುಣಿತ, ಜಗ್ಗಲಗಿ ಕುಣಿತ, ಗೊಂಬೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ ಗಮನ ಸೆಳೆದವು.
bigtvnews | Hubli Dharwad News | Kannada News | Karnataka News Hubli News | News In Hubli | Local news





