ಪ್ರವಾದಿ ಮುಹಮ್ಮದ್ ಅವರ ಹೇಳಿಕೆಗಾಗಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಛೀಮಾರಿ ಹಾಕಿದೆ. ಬಳಿಕ ವಿರೋಧ ಪಕ್ಷದ ನಾಯಕರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಅಧಿಕಾರದಲ್ಲಿರುವ ಪಕ್ಷ ನಾಚಿಕೆಯಿಂದ ತಲೆ ತಗ್ಗಿಸಬೇಕು” ಎಂದು ಕಾಂಗ್ರೆಸ್ ವಾಗ್ದಾಳಿ ಮಾಡಿದೆ.
ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡಿನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, “ಆಡಳಿತದ ಮೂಲಕ ದೇಶದಲ್ಲಿ ವಾತಾವರಣವನ್ನು ಸೃಷ್ಟಿಸಲಾಗಿದೆ. ಕಾಮೆಂಟ್ ಮಾಡಿರುವುದು ನೂಪುರ್ ಶರ್ಮಾ ಅಲ್ಲ. ಬದಲಿಗೆ ಪ್ರಧಾನಿ, ಗೃಹ ಸಚಿವರು, ಬಿಜೆಪಿ ಮತ್ತು ಆರ್‌ಎಸ್‌ಎಸ್. ಇವರ ಕಾಮೆಂಟ್ ಕೋಪ, ದ್ವೇಷದ ವಾತಾವರಣವನ್ನು ಸೃಷ್ಟಿಸಿದೆ. ಇದು ದೇಶ ವಿರೋಧಿ ಕೃತ್ಯವಾಗಿದೆ. ಇದು ಭಾರತದ ಹಿತಾಸಕ್ತಿಗೆ ವಿರುದ್ಧವಾಗಿದೆ. ಇದು ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ ಮತ್ತು ಇದು ದುರಂತಕ್ಕೆ ಕಾರಣವಾಗುತ್ತಿದೆ’ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





