Breaking News

ಶ್ರೀಮಂತ ಭಂಗಲೆಗಳ ಮೇಲೆ ಬುಲ್ಡೋಜರ್‌ʼಗಳು ಹೋಗುವುದಿಲ್ಲ. ಆದರೆ, ಬಡವರು ದರ್ಬಾರ್ : ಕುಮಾರಸ್ವಾಮಿ


ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್‌ʼಗಳು, ಅರಮನೆಯಂಥ ಭಂಗಲೆಗಳ ಮೇಲೆ ಬುಲ್ಡೋಜರ್‌ʼಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್‌ʼಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಇಂದು ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದರು.

ಬಡವರಿಗೆ, ಮಧ್ಯಮವರ್ಗದ ಜನರಿಗೆ ಕಡಿಮೆ ದರದಲ್ಲಿ ನಿವೇಶನ, ಮನೆ ಕೊಡಬೇಕಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಅದೊಂದು ಭ್ರಷ್ಟಕೂಪ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.ಬೆಂಗಳೂರು ನಗರ ಒಂದರಲ್ಲೇ ಸುಮಾರು ೩೦ ಸಾವಿರಕ್ಕೂ ಹೆಚ್ಚು ಭೂಮಿಯನ್ನು ಭೂಗಳ್ಳರು ಕಬಳಿಸಿದ್ದಾರೆ. ಅದನ್ನು ಮರು ವಶಪಡಿಸಿಕೊಂಡರೆ ಲಕ್ಷಾಂತರ ಬಡವರಿಗೆ ಮನೆ ಕಟ್ಟಿಕೊಡಬಹುದು. ಅಂಥ ಕೆಲಸವನ್ನು ಬಿಡಿಎ ಮಾಡುತ್ತಿಲ್ಲ. ನನಗೊಂದು ಅವಕಾಶ ಕೊಟ್ಟು ನೋಡಿ. ಬೆಂಗಳೂರು ನಗರವನ್ನು ಅಭಿವೃದ್ಧಿಯ ಹಳಿಯ ಮೇಲೆ ತಂದು ನಿಲ್ಲಿಸುತ್ತೇನೆ ಎಂದು ಅವರು ಘೋಷಣೆ ಮಾಡಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *