ವಿಜಯಪುರ: ಇಬ್ಬರು ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಶಿರನಾಳ ಗ್ರಾಮದ ತೋಟದ ವಸ್ತಿಯಲ್ಲಿ ನಡೆದಿದೆ.
ಶ್ರೀದೇವಿ ಸಂತೋಷ್ ಬಿರಾದಾರ (31), ಮಕ್ಕಳಾದ ಶ್ರೀಶೈಲ ಬಿರಾದಾರ (7) ಮತ್ತು ಮಹೇಶ ಬಿರಾದಾರ (5) ಮೃತ ದುರ್ದೈವಿಗಳು.ಶ್ರೀದೇವಿ ತನ್ನ ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ.
ಸಾವಿಗೆ ಕಾರಣ ತಿಳಿದುಬಂದಿಲ್ಲ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.