Breaking News

ಟ್ಯಾಂಕರ್ , ಕಾರ್ ಮಧ್ಯೆ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು


ಕಲಬುರಗಿ: ಆಯಿಲ್ ಟ್ಯಾಂಕರ್ ಮತ್ತು ಸ್ವಿಫ್ಟ್ ಕಾರೊಂದರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬರ ತೀವ್ರ ಗಾಯಗೊಂಡಿದ್ದು ಪರಿಸ್ಥಿತಿ ಗಂಭೀರವಾಗಿದೆ. ಕಲಬುರಗಿ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ.

ಕಲಬುರಗಿ ಹೊರವಲಯದ ಶಹಬಾದ್ ರಸ್ತೆಯ ಶೆಟ್ಟಿ ಕಾಲೇಜು ಬಳಿ ಕಾರು-ಟ್ಯಾಂಕರ್ ಡಿಕ್ಕಿ ಆಗಿವೆ. ಅಪಘಾತದ ತೀವ್ರತೆಗೆ ಕಲಬುರಗಿ ನಿವಾಸಿಗಳಾದ ಅಮಿತ್ (21), ಆದಶ್೯ (22) ಎಂಬಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮಹಾಂತೇಶ್ ಎಂಬವರ ಪರಿಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುವನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಾರು ಕಲಬುರಗಿಯಿಂದ ಶಹಬಾದ್‌ನತ್ತ ಹೊರಟಿತ್ತು. ಟ್ಯಾಂಕರ್​ ಶಹಬಾದ್​ನಿಂದ ಕಲಬುರಗಿ ಕಡೆಗೆ ಬರುತ್ತಿತ್ತು. ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಲಬುರಗಿ ಸಂಚಾರಿ-2 ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *