ಬೆಂಗಳೂರು; ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿಯ ಮನೆ ಸೇರಿ ವಿವಿಧ ಕಡೆ ಪರಿಶೀಲನೆ ನಡೆಸಲಾಗುತ್ತಿದೆ.
ಮಂಗಳವಾರ ಬೆಳ್ಳಂಬೆಳಗ್ಗೆ ಕರ್ನಾಟಕದ ಭ್ರಷ್ಟಾಚಾರ ನಿಗ್ರಹದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಮಾಲೀಕರು ಆಗಿರುವ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನ 5 ಪ್ರದೇಶಗಳಲ್ಲಿ 40ಕ್ಕೂ ಅಧಿಕ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಸಂಜೆಯ ತನಕ ಪರಿಶೀಲನೆ ಕಾರ್ಯ ನಡೆಯಲಿದೆ ಎಂದು ಅಂದಾಜಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





