Breaking News

ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯಮಾಡಿದ ಸಿ.ಟಿ.ರವಿ


ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಉಲ್ಟಾ ಮಚ್ಚೆ ಇದ್ದು, ಅವರು ಹೇಳಿದ್ದೆಲ್ಲಾ ಉಲ್ಟಾ ಆಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದು ಉಲ್ಟಾಆಗುತ್ತದೆ ಎಂಬುದು ಐತಿಹಾಸಿಕ ಸತ್ಯ.

ಅವರಿಗೆ ಅವರ ಮಾತನ್ನು ಬೇಕಾದರೆ ಪುನರ್‌ ಪ್ರಸಾರ ಮಾಡಬೇಕು. ನರೇಂದ್ರ ಮೋದಿ ಅವರು ಪ್ರಧಾನಿಯಾಗಲ್ಲ ಎಂದಿದ್ದರು. ಆದರೆ ಎರಡು ಬಾರಿ ಪ್ರಧಾನಿಯಾದರು. ನಾನೇ ಮುಂದಿನ ಮುಖ್ಯಮಂತ್ರಿ ಎಂದರು. ಚಾಮುಂಡೇಶ್ವರಿಯಲ್ಲಿ ಸೋತರು. ಸಿದ್ದರಾಮಯ್ಯ ಅವರಿಗೆ ಉಲ್ಟಾಮಚ್ಚೆ ಇರಬಹುದು, ಬೇಕಾದರೆ ಪರೀಕ್ಷೆ ಮಾಡಲಿ ಲೇವಡಿ ಮಾಡಿದರು. ಕಾಂಗ್ರೆಸ್‌ ಆಂತರಿಕ ಸಮೀಕ್ಷೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಖಾಲಿ ಡಬ್ಬಾ ಜಾಸ್ತಿ ಶಬ್ದ ಮಾಡುತ್ತದೆ. ಉತ್ತರಾಖಂಡ ಚುನಾವಣೆಗೆ ಮುಂಚೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದರು. ಆದರೆ ಬಂತಾ? ಗೋವಾದಲ್ಲಿ ಖಾತೆ ಹಂಚಿಕೆಯನ್ನೂ ಮಾಡಿದ್ದರು. ಪಂಜಾಬ್‌ನಲ್ಲಿ ಸೋತು ಹೋದರು. ಉತ್ತರಪ್ರದೇಶದಲ್ಲಿ ‘ಮೇ ಲಡ್ಕೀ ಹೂಂ, ಲಡ್‌ ಸಕ್ತೀ ಹೂಂ’ ಎಂದು ಡ್ರಾಮಾ ಮಾಡಿದರು. ಆದರೆ, ಅಲ್ಲಿ ಏನಾಯಿತು? ಚುನಾವಣೆಗೂ ಮುಂಚೆ ಕಾಂಗ್ರೆಸ್‌ ಬಹಳ ಶಬ್ದ ಮಾಡುತ್ತದೆ ಎಂದು ಟೀಕಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *