Breaking News

ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ: ಶ್ವಾನದಳದಿಂದ ತಪಾಸಣೆ

ಹುಬ್ಬಳ್ಳಿ: ರಾಜ್ಯದ ಜನತೆಯನ್ನೇ ಬೆಚ್ಚಿ ಬಿಳಿಸಿರುವ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಹೈ ಅಲರ್ಟ್ ಆಗಿದ್ದು, ಕೊಲೆ ನಡೆದ ಕ್ಷಣದಿಂದಲೇ ತನಿಖೆಯನ್ನು ಕೈಗೊಂಡಿದ್ದು, ಪ್ರಾಥಮಿಕ ಹಂತವಾಗಿ ಶ್ವಾನದಳದಿಂದ ತಪಾಸಣೆ ನಡೆಸುತ್ತಿದೆ.

ಹುಬ್ಬಳ್ಳಿಯ ಉಣಕಲ್ ಪ್ರೆಸಿಡೆಂಟ್ ಹೊಟೇಲ್ ನಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಶೋಧಕ್ಕಾಗಿ ಎಲ್ಲ ರೀತಿಯ ಆಯಾಮಗಳಿಂದಲೂ ತನಿಖೆಯನ್ನು ಕೈಗೊಂಡಿದ್ದು, ಪೊಲೀಸ್ ಆಯುಕ್ತರ ಭೇಟಿಯ ಬೆನ್ನಲ್ಲೇ ಶ್ವಾನದಳದಿಂದ ತಪಾಸಣೆ ನಡೆಸಲಾಗುತ್ತಿದೆ.

ಚುರುಕಿನ ತನಿಖೆ ನಡೆದಿದ್ದು, ಕೊಲೆಗಾರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *