ಹುಬ್ಬಳ್ಳಿ: ಚಂದ್ರಶೇಖರ ಗುರೂಜಿಯವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ತನಿಖಾ ತಂಡಗಳನ್ನು ರಚನೆ ಮಾಡಿದ್ದು, ತನಿಖೆಯ ನಂತರವೇ ಕೊಲೆಯ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಎಲ್ಲಾ ಹಂತದಲ್ಲಿಯೂ ಕೂಡ ತನಿಖೆ ನಡೆಸಲಾಗುತ್ತದೆ ಎಂದು ಹು-ಧಾ ಪೊಲೀಸ್ ಆಯುಕ್ತರಾದ ಲಾಭುರಾಮ್ ಹೇಳಿದರು.
ಉಣಕಲ್ ಹತ್ತಿರದ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇಂದು ಮಧ್ಯಾಹ್ನದ ವೇಳೆಯಲ್ಲಿ ಹುಬ್ಬಳ್ಳಿಯ ಉಣಕಲ್ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಯಾರೋ ಇಬ್ಬರು ಚಂದ್ರಶೇಖರ ಗುರೂಜಿಯವರನ್ನು ಕೆಳಗೆ ಕರೆದು ಮಾತನಾಡುವ ವೇಳೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದರು.
ಇನ್ನೂ ಕೊಲೆಯ ತನಿಖೆಗೆ ಐದು ತಂಡಗಳನ್ನು ರಚನೆ ಮಾಡಿದ್ದು, ಎಲ್ಲ ಆಯಾಮಗಳಲ್ಲಿಯೂ ಕೂಡ ತನಿಖೆ ನಡೆಸಲಾಗುತ್ತಿದೆ. ಈಗ ಯಾರನ್ನು ವಶಕ್ಕೆ ಪಡೆದಿಲ್ಲ. ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಕೊಲೆ ಮಾಡಿದವರ ಬಗ್ಗೆ ಎಲ್ಲ ರೀತಿಯಲ್ಲಿಯೂ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ತನಿಖೆಯ ನಂತರವೇ ಮಾಹಿತಿ ಲಭ್ಯವಾಗಬೇಕಿದೆ ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





