Breaking News

ಚಂದ್ರಶೇಖರ್ ಗುರೂಜಿ ಹತ್ಯೆ ಇಬ್ಬರು ಸೆರೆ

ಹುಬ್ಬಳ್ಳಿ,: ಚಾಕುವಿನಿಂದ ಇರಿದು ಸರಳವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನ ಹತ್ಯೆಗೈದಿದ್ದ ಇಬ್ಬರು ಆರೋಪಿಗಳನ್ನ ಕೇವಲ ನಾಲ್ಕೇ ಗಂಟೆಗಳಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಹಂತೇಶ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು. ಬೆಳಗಾವಿಯ ರಾಮದುರ್ಗದ ಬಳಿ ಬಂಧಿಸಲಾಗಿದೆ. ನಿಗೂಢ ಸ್ಥಳಗಳಲ್ಲಿ ಆರೋಪಿಗಳನ್ನ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಇಂದು ಮಧ್ಯಾಹ್ನ ಭಕ್ತರ ಸೋಗಿನಲ್ಲಿ ಬಂದಿದ್ಧ ಇಬ್ಬರು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಚಂದ್ರಶೇಖರ್ ಗುರೂಜಿ ಅವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಚಾಕುವಿನಿಂದ ಇರಿದು ಕೊಂದು ಪರಾರಿಯಾಗಿದ್ದರು.

ಘಟನೆ ಬೆನ್ನಲ್ಲೆ ಅಲರ್ಟ್ ಆದ ಪೊಲೀಸರು ಕೊಲೆಯಾದ ನಾಲ್ಕೇ ಗಂಟೆಗಳಲ್ಲಿ ಹಂತಕರನ್ನ ಬಂಧಿಸಿದ್ದಾರೆ

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *