ಹುಬ್ಬಳ್ಳಿ:ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ವನಜಾಕ್ಷಿ ಶಿರೂರು ತೀವ್ರ ವಿಚಾರಣೆ ನಡೆಸಲಾಗಿದ್ದು, ವನಜಾಕ್ಷಿ ಶಿರೂರ ಹಂತಕ ಮಹಾಂತೇಶ ಶಿರೂರ ಪತ್ನಿಯಾಗಿರುವ ಹಿನ್ನೆಲೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದಾರೆ.
ಸತತವಾಗಿ ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲ ಬ್ಯಾಕೋಡ ನೇತೃತ್ವದಲ್ಲಿ ವಿಚಾರಣೆ ನಡೆಸಿ ಮನೆಗೆ ವಾಪಸ್ ಕಳಿಸಿದ್ದಾರೆ.
ಇನ್ನೂ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





