ಹುಬ್ಬಳ್ಳಿ: ನೂರಾರು ಯುವಕರಿಗೆ ಹಾಗೂ ಯುವತಿಯರಿಗೆ ಉದ್ಯೋಗ ನೀಡಿ ಅವರ ಕುಟುಂಬಗಳಿಗೆ ಆಸರೆಯಾಗಿದ್ದ ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ ಗುರೂಜಿಯನ್ನು ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಸುದ್ದಿ ತಿಳಿಯುತ್ತಿದ್ದಂತೆಯೇ ಹುಬ್ಬಳ್ಳಿಯ ಕಿಮ್ಸ್ ಶವಗಾರಕ್ಕೆ ಆಗಮಿಸಿದ ಸಿಬ್ಬಂದಿ ಆಕ್ರಂದನ ಮುಗಿಲು ಮುಟ್ಟುವಂತಿತ್ತು .
ನಿನ್ನೆ ಮಧ್ಯಾಹ್ನ ಖಾಸಗಿ ಹೊಟೇಲ್‌ನಲ್ಲಿ ಕೊಲೆಯಾದ ಚಂದ್ರಶೇಖರ ಗುರೂಜಿ ಸರಳ ವಾಸ್ತು ಹೆಸರಿನಲ್ಲಿ ನೂರಾರು ಕುಟುಂಬಕ್ಕೆ ಆಧಾರವಾಗಿದ್ದರು . ಅದೆಷ್ಟೋ ಯುವಕರಿಗೆ ಉದ್ಯೋಗ ನೀಡುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಿದ್ದರು ಆದರೆ ಇಂದು ಅವರು ಏಕಾಏಕಿ ಕೊಲೆಯಾಗಿರುವುದು ಸಿಬ್ಬಂದಿಯ ಕಣ್ಣೀರಿಗೆ ಕಾರಣವಾಗಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





