Breaking News

ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ವಾಗುತ್ತಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಕಾರ್ ಪಲ್ಟಿ : ಪ್ರಾಣಾಪಾಯದಿಂದ ಪಾರು


ಧಾರವಾಡ : ಡಾ.ಚಂದ್ರಶೇಖರ ಗುರೂಜಿ ಅವರ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿ ಅವರ ಕಾರು ಅಪಘಾತವಾಗಿದ್ದು , ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ .

ನಿನ್ನೆ ಕೊಲೆಗೀಡಾದ ಡಾ.ಚಂದ್ರಶೇಖರ ಗುರೂಜಿ ಅವರ ಅಂತ್ಯ ಸಂಸ್ಕಾರಕ್ಕೆ ಶಿವಲಿಂಗೇಶ್ವರ ಸ್ವಾಮೀಜಿ ಬಂದಿದ್ದರು . ಅಂತ್ಯ ಸಂಸ್ಕಾರ ಮುಗಿಸಿ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಧಾರವಾಡ ತಾಲೂಕಿನ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ .

ಸ್ವಾಮೀಜಿ ಸೇರಿದಂತೆ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಗಾಯಾಳುಗಳನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ . ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *