Breaking News

ಲೈಂಗಿಕ ಕಿರುಕುಳ : ಮಲಯಾಳಂ ನಟ ಬಂಧನ


ತಿರುವನಂತಪುರ: ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜುಲೈ 4ರಂದು ಅಯ್ಯಂತೊಳೆ ಎಸ್‌ಎನ್‌ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ. ಸದ್ಯ ಶ್ರೀಜಿತ್‌ ರವಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿದೆ ಎಂದು ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ ಬಳಿಕ ರವಿ ಅವರನ್ನು ಬಂಧಿಸಲಾಗಿದೆ. 2016ರಲ್ಲಿ ಪಾಲಕ್ಕಾಡ್ ಪೊಲೀಸರು ಇಂತಹದೇ ಪ್ರಕರಣದಲ್ಲಿ ರವಿಯನ್ನು ಬಂಧಿಸಿದ್ದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *