Breaking News

ಕೇಂದ್ರ ಉಕ್ಕು ಸಚಿವ ಆರ್‌ಸಿಪಿ ಸಿಂಗ್ ರಾಜನಾಮೆ


ನವದೆಹಲಿ : ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಇಲಾಖೆಯ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ಹಾಗೂ ಕೇಂದ್ರ ಉಕ್ಕು ಸಚಿವ ಆರ್‌ಸಿಪಿ ಸಿಂಗ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬುಧವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ನಖ್ವಿ ಹಾಗೂ ಆರ್‌ಸಿಪಿ ಸಿಂಗ್‌ ಅವರ ರಾಜ್ಯಸಭಾ ಸದಸ್ಯತ್ವ ಗುರುವಾರ ಕೊನೆಗೊಳ್ಳಲಿದ್ದು, ನಿಯಮಗಳ ಪ್ರಕಾರ ನಾಳೆಯೊಳಗೆ ಕೇಂದ್ರ ಸಂಪುಟಕ್ಕೆ ರಾಜೀನಾಮೆ ರಾಜೀನಾಮೆ ನೀಡುವುದು ಅವರಿಗೆ ಅನಿವಾರ್ಯವಾಗಿತ್ತು. ಇದೇ ಮೊದಲ ಬಾರಿಗೆ ಕೇಂದ್ರ ಸಚಿವರು ಸಂಸತ್‌ನ ಎರಡೂ ಸದನಗಳಲ್ಲಿ ತಮ್ಮ ಸದಸ್ಯತ್ವ ಮುಕ್ತಾಯವಾದ ಕಾರಣಕ್ಕಾಗಿ ತಮ್ಮ ಸ್ಥಾನವನ್ನು ತೊರೆದಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ನಖ್ವಿ ಅವರನ್ನು ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಹೆಸರಿಸುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಎರಡೂ ಸದನಗಳಿಗೆ ಮರು ಆಯ್ಕೆಯಾಗುವ ಮೊದಲು ಇಬ್ಬರೂ ಇನ್ನೂ ಆರು ತಿಂಗಳು ಸಚಿವರಾಗಿ ಮುಂದುವರಿಯಬಹುದು ಆದರೆ ಈ ಸಂದರ್ಭದಲ್ಲಿ, ಅವರು ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕಾಗುತ್ತದೆ. ಇತ್ತೀಚೆಗೆ ಉತ್ತರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಹಲವಾರು ಬಿಜೆಪಿ ನಾಯಕರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಆದರೆ, ಪಕ್ಷವು ನಖ್ವಿಗೆ ರಾಜ್ಯಸಭಾ ಟಿಕೆಟ್ ನೀಡಿರಲಿಲ್ಲ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *