Breaking News

ಹರ್ಷ ಹತ್ಯೆ ಪ್ರಕರಣ : ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ


ಹಿಂದೂ ಕಾರ್ಯಕರ್ತ ಹರ್ಷನನ್ನು ಹತ್ಯೆಗೈದ ಆರೋಪಿಗಳ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಜೈಲಿನೊಳಗೆ ಮೊಬೈಲ್ ಬಳಸಿದ್ದಕ್ಕಾಗಿ ಅವರು ಪ್ರತ್ಯೇಕ ಜೈಲು ಶಿಕ್ಷೆಗೆ ಒಳಗಾಗುವ ಸಾಧ್ಯತೆಗಳಿವೆ ಎಂದು ಹಿರಿಯ ಅಧಿಕಾರಿ ತಿಳಿಸಿದರು.

ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಈ ಆರೋಪಿಗಳು ತಮ್ಮ ಕುಟುಂಬ ಸದಸ್ಯರು ಹಾಗೂ ಸ್ನೇಹಿತರೊಂದಿಗೆ ಮಾತನಾಡಿರುವ ವಿಡಿಯೋಗಳು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಮೋಹನ್, ಜೈಲಿನ ಚೀಫ್​ ಸೂಪರಿಂಟೆಂಡೆಂಟ್ ರಂಗನಾಥ್ ಸೇರಿದಂತೆ 6 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ತನಿಖೆಗೂ ಆದೇಶಿಸಿದ್ದರು. ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಸೇರಿದಂತೆ ಅನೇಕ ಆರೋಪಿಗಳು ತಮ್ಮ ಬ್ಯಾರಕ್‌ಗಳಲ್ಲಿ ಮೊಬೈಲ್ ಬಳಸಿದ್ದಾರೆಂಬುದು ವಿಚಾರಣೆಯಲ್ಲಿ ಸಾಬೀತಾಗಿದ್ದು “ಈ ಆರೋಪಕ್ಕಾಗಿ ಮೂಲ ಪ್ರಕರಣದ ಶಿಕ್ಷೆಯನ್ನು ಹೊರತುಪಡಿಸಿ ಪ್ರತ್ಯೇಕ ಐದು ವರ್ಷಗಳ ಶಿಕ್ಷೆಗೆ ಆರೋಪಿಗಳು ಗುರಿಯಾಗಬಹುದು” ಎಂದು ಅಲೋಕ್ ಮೋಹನ್ ಹೇಳಿದರು

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *