Breaking News

ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್


ಹುಬ್ಬಳ್ಳಿ : ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ ನಡೆದಿದ್ದು, ಈಗಾಗಲೇ ಕೊಲೆಗಾರರನ್ನು ಪೊಲೀಸರು ಬಂಧಿಸಿದ್ದು, ಕೊಲೆ ಆರೋಪಿ ಮಹಾಂತೇಶ್ ಐದು ದಿನಗಳ ಹಿಂದೆ ಫೇಸ್ ಬುಕ್ ನಲ್ಲಿ ಗುರೂಜಿಯನ್ನು ಕೊಲ್ಲುವ ಸುಳಿವು ಕೊಟ್ಟಿದ್ದ ಎಂದು ತಿಳಿದುಬಂದಿದೆ.

ಐದು ದಿನಗಳ ಹಿಂದೆ ಆರೋಪಿ ಮಹಾಂತೇಶ್ ಫೇಸ್‌ಬುಕ್‌ ನಲ್ಲಿ ಭಗವದ್ಗೀತೆಯ ಶ್ಲೋಕದ ಪೋಸ್ಟ್ ಅನ್ನು ಶೇರ್ ಮಾಡಿದ್ದ ಆರೋಪಿ, ‘ಅಧರ್ಮ ತಾಂಡವಾಡುತ್ತಿರುವಾಗ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ‌ ನೀಡಿರುವೆ ಪ್ರಭು. ಇನ್ನು ವಿಳಂಬವೇಕೆ ಪ್ರಭುವೇ? ಆದಷ್ಟು ಬೇಗ ಅವತರಿಸು ಪ್ರಭು. ಸಂಭವಾಮಿ ಯುಗೇ ಯುಗೇ’ ಎಂದು ಬರೆದುಕೊಂಡಿದ್ದಾನೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *