Breaking News

ಇಂದು ಪಂಜಾಬ್ ಜನರ​ ಪಾಲಿಗೆ ವಿಶೇಷ ದಿನ… ಯಾಕೆ ಗೊತ್ತಾ!


ಚಂಡೀಗಢ: ಇಂದು ಪಂಜಾಬ್ ಜನರ​ ಪಾಲಿಗೆ ವಿಶೇಷ ದಿನ. ಏಕೆಂದರೆ, ಇಡೀ ರಾಜ್ಯನ್ನು ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್​ ಸಿಎಂಗೆ ಇದು ಎರಡನೇ ಮದುವೆ. ಇಷ್ಟು ಕೇಳಿದ ಮೇಲೆ ನಿಮ್ಮ ಮನಸ್ಸಿನಲ್ಲಿ ವಧು ಯಾರು? ಮತ್ತು ವಧುವಿನ ವಯಸ್ಸೆಷ್ಟು? ಎಂಬಿತ್ಯಾದಿ ಪ್ರಶ್ನೆಗಳು ಮೂಡುವುದು ಸಹಜ. ನಿಮ್ಮ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರವನ್ನು ನಾವು ಕೊಡುತ್ತೇವೆ. ಹೀಗಾಗಿ ಓದುವುದನ್ನು ಮುಂದುವರಿಸಿ…

48 ವರ್ಷದ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರು ಇಂದು ಚಂಡೀಗಢದಲ್ಲಿ ನಡೆಯಲಿರುವ ಖಾಸಗಿ ಸಮಾರಂಭದಲ್ಲಿ ಡಾ. ಗುರುಪ್ರೀತ್​ ಕೌರ್​ ಎಂಬುವರನ್ನು ವರಿಸಲಿದ್ದಾರೆ. ಈ ಹಿಂದೆ ಸ್ಟ್ಯಾಂಡ್​ ಅಪ್​​ ಕಾಮಿಡಿಯನ್​ ಆಗಿದ್ದ ಮಾನ್​, 6 ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿಯಿಂದ ಡಿವೋರ್ಸ್​ ಪಡೆದುಕೊಂಡಿದ್ದಾರೆ. ಮಾನ್​ ಮತ್ತು ಗುರುಪ್ರೀತ್​ ನಡುವೆ 16 ವರ್ಷಗಳ ವಯಸ್ಸಿನ ಅಂತರವಿದೆ.

ವಧುವಿನ ಬಗ್ಗೆ ತಿಳಿಯುವುದಾದರೆ, ಮಾನ್​ ಕೈಹಿಡಿಯಲಿರುವ ವಧುವಿನ ಹೆಸರು ಡಾ. ಗುರುಪ್ರೀತ್​ ಕೌರ್​. ಇವರ ವಯಸ್ಸು 32. ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ. ಕುರುಕ್ಷೇತ್ರ ಜಿಲ್ಲೆಯ ಪೆಹೊವಾ ಮೂಲದವರು. ಅವರ ತಂದೆ ಇಂದ್ರಜಿತ್​ ಸಿಂಗ್​ ಓರ್ವ ರೈತ. ಅವರ ತಾಯಿ ರಾಜ್​ ಕೌರ್​ ಗೃಹಿಣಿ. ಗುರುಪ್ರೀತ್​ ಕೌರ್​ಗೆ ಇಬ್ಬರು ಸಹೋದರಿಯರಿದ್ದಾರೆ. ಇಬ್ಬರು ಕೂಡ ವಿದೇಶದಲ್ಲಿದ್ದಾರೆ. ಮಾನ್​ ಅವರ ನಿಕಟ ಮೂಲಗಳ ಪ್ರಕಾರ, ಎರಡೂ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಸಂಬಂಧ ಇದೆ.

Share News

About BigTv News

Check Also

ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಕೈಹಾಕಿರುವುದು ಈ ನಾಡಿನ ಒಂದು ದುರದೃಷ್ಟ…..

ದೆಹಲಿ:‌ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಿನ್ನೆ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ …

Leave a Reply

Your email address will not be published. Required fields are marked *

You cannot copy content of this page