Breaking News

ಭಾರತದಲ್ಲಿ ಮತ್ತೆ ಮುಂದುವರೆದ ಕೋವಿಡ್ ಅಟ್ಟಹಾಸ


ನವದೆಹಲಿ: ಭಾರತದಲ್ಲಿ 15 ಸಾವಿರದ 899 ಹೊಸ ಕೋವಿಡ್ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು ಕಳೆದ 24 ಗಂಟೆಗಳಲ್ಲಿ 38 ಮಂದಿ ಮೃತಪಟ್ಟಿದ್ದಾರೆ. ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಮೊನ್ನೆಗಿಂತ ಕೊಂಚ ಕಡಿಮೆಯಾಗಿದೆ. ಆದರೆ ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದ್ದು ಮೊನ್ನೆಗಿಂತ ಹತ್ತು ಮಂದಿ ಹೆಚ್ಚು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶದಿಂದ ತಿಳಿದುಬಂದಿದೆ.

ದೇಶದಲ್ಲಿ ಪ್ರಸ್ತುತ 1 ಲಕ್ಷದ 22 ಸಾವಿರದ 335 ಮಂದಿ ಸೋಂಕಿತರಿದ್ದು ದಿನಂಪ್ರತಿ ಕೋವಿಡ್ ಸೋಂಕಿತರ ಪ್ರಮಾಣ ಶೇಕಡಾ 4.96ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 15 ಸಾವಿರದ 899 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 4 ಕೋಟಿಯ 29 ಲಕ್ಷದ 37 ಸಾವಿರದ 876 ಮಂದಿ ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ದೇಶದಲ್ಲಿ ಇದುವರೆಗೆ 5 ಲಕ್ಷದ 25 ಸಾವಿರದ 343 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಗುಣಮುಖ ಹೊಂದುತ್ತಿರುವವರ ಪ್ರಮಾಣ ಶೇಕಡಾ 98.51ರಷ್ಟಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *