Breaking News

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ


ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆೆಯಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಬಾಣಂತಿ ಹಾಗೂ ಮೂವರು ಮಕ್ಕಳು ಆರೋಗ್ಯವಾಗಿದ್ದಾರೆ.

‌ಈ ಸಂಬಂಧ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಸರ್ಜನ್‌ ಮಧುಸೂಧನ್ ನಾಯಕ್‌, ಸರ್ಕಾರಿ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ತ್ರಿವಳಿ ಮಕ್ಕಳ ಜನನವಾಗಿದೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಮೂವರು ಮಕ್ಕಳಲ್ಲಿ ಎರಡು ಗಂಡು ಹಾಗೂ ಒಂದು ಹೆಣ್ಣು ಎಂದು ಸಂತಸ ಹಂಚಿಕೊಂಡರು.

ಹೆಣ್ಣು ಮಗು 2 ಕೆಜಿ 150 ಗ್ರಾಂ ತೂಕವಿದ್ದರೆ, ಗಂಡು ಮಕ್ಕಳು ಕ್ರಮವಾಗಿ 1 ಕೆ.ಜಿ. 700 ಗ್ರಾಂ, 2 ಕೆ.ಜಿ ಇವೆ. ಮಕ್ಕಳ ತೂಕ ಕಡಿಮೆ ಇರುವ ಕಾರಣ ಆರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ತ್ರಿವಳಿಗೆ ಜನ್ಮನೀಡಿದ ಮಹಿಳೆ ಉತ್ತರ ಕನ್ನಡ ಜಿಲ್ಲೆೆಯ ಅಂಕೋಲದವರಾಗಿದ್ದು ಸಿದ್ದಿ ಸಮುದಾಯಕ್ಕೆ ಸೇರಿದ್ದಾರೆ. ಪ್ರಸವ ಪೂರ್ವದಲ್ಲಿಯೇ ಮೂರು ಮಕ್ಕಳು ಇರುವುದು ಖಚಿತವಾಗಿದ್ದರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವ ಆಸ್ಪತ್ರೆಯೂ ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಲಿಲ್ಲ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *