Breaking News

ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು


ಯಲ್ಲಾಪುರ : ಇಲ್ಲಿನ ಹಳಿಯಾಳ- ಯಲ್ಲಾಪುರ ರಾಜ್ಯ ಹೆದ್ದಾರಿಯ ತಟ್ಟಿಹಳ್ಳ ಮತ್ತು ತಾಟವಾಳ ಮಧ್ಯೆ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗುರುವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ .

ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮದ ನಿವಾಸಿ ಪೀಟರ್‌ ಹಂಡಿ ( 26 ) ಮೃತಪಟ್ಟವರು . ಅವರು ದಾಂಡೇಲಿಯ ಕಾಗದ ಕಾರ್ಖಾನೆಯ ನೌಕರನಾಗಿದ್ದು ಎಂದಿನಂತೆ ತಮ್ಮ ಬೈಕ್ ಮೂಲಕ ಕರ್ತವ್ಯಕ್ಕೆಂದು ದಾಂಡೇಲಿಗೆ ಬರುವ ಸಂದರ್ಭದಲ್ಲಿ ತಾಟವಾಳ ಸಮೀಪದ ಕಿರವತ್ತಿ ಕ್ರಾಸ್‌ನ ಚೆಕ್ ಪೋಸ್ಟ್ ಸಮೀಪ ಈ ಘಟನೆ ಸಂಭವಿಸಿದೆ . ಘಟನಾ ಸ್ಥಳಕ್ಕೆ ಹಳಿಯಾಳ ಪಿಎಸ್ ಐ ಶಿವಾನಂದ ನಾವದಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *