Breaking News

ಮುಂದಿನ ವರ್ಷದ ವಿಧಾನಸಭಾ ಚುನಾವಣೆ ನನಗೆ ಕೊನೆಯ ಚುನಾವಣೆ : ಸಿದ್ದರಾಮಯ್ಯ



ಕೊಳ್ಳೇಗಾಲ: ಮುಂದಿನ ವರ್ಷದ ವಿಧಾನಸಭಾ ಚುನಾವಣೆ ನನಗೆ ಕೊನೆಯ ಚುನಾವಣೆಯಾಗಿದ್ದು, ಬಳಿಕ ರಾಜಕೀಯದಿಂದ ನಿವೃತ್ತಿ ಹೊಂದುವ ಮೂಲಕ ಇತರರಿಗೆ ಅವಕಾಶ ಕಲ್ಪಿಸಿಕೊಡುವುದಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಿಸಿದರು.

ಪಟ್ಟಣದ ಬಸ್ತೀಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಸಿದ್ದಪ್ಪಾಜಿ ಕಂಡಾಯ ಮತ್ತು ಕೊಂಡೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಆಗಸ್ಟ್‌ 3ರಂದು ನಡೆಯುವ ನನ್ನ 75ನೇ ಜನ್ಮ ದಿನೋತ್ಸವಕ್ಕೆ ಆರೆಸ್ಸೆಸ್‌ನವರು ಸಿದ್ದರಾಮಯ್ಯ ಅವರ ಉತ್ಸವ ಎಂದು ನಾಮಕರಣ ಮಾಡಿದ್ದಾರೆ. ಅದು ಉತ್ಸವ ಅಲ್ಲ ಅಮೃತೋತ್ಸವ. ಅದಕ್ಕೆ ಎಲ್ಲರೂ ಬನ್ನಿ ಎಂದು ಆಹ್ವಾನ ನೀಡಿದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *