Breaking News

ಮಗುಚಿ ಬಿದ್ದ ಕಾರು : ಒಬ್ಬರು ಸಾವು


ಸುರತ್ಕಲ್: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಕಟ್ಟೆ ಸಿಗ್ನಲ್ ಬಳಿ  ನಿಂತಿದ್ದ ಕಾರಿನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಲಾಯಿ ಗೋಕುಲನಗರ ನಿವಾಸಿ ಲೋಕನಾಥ ಮೃತ ವ್ಯಕ್ತಿ. ಲೋಕನಾಥ ಅವರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊನ್ನಕಟ್ಟೆ ಸಿಗ್ನಲ್ ಬಳಿ ರಸ್ತೆ ದಾಟಲು ಕಾರು ನಿಲ್ಲಿಸಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಮಗುಚಿ ಬಿದ್ದಿದೆ.

ಕಾರಿನ ಮುಂಭಾಗದಲ್ಲಿ ಇದ್ದ ದ್ವಿಚಕ್ರ ವಾಹನಕ್ಕೂ ಹಾನಿಯಾಗಿದ್ದು, ದ್ವಿಚಕ್ರ ವಾಹನ ಸವಾರ ತನ್ನ ಸ್ಕೂಟರ್‌ ಬಿಟ್ಟು ಓಡಿದ್ದರಿಂದ ಪ್ರಾಣಾಪಾಯದಿಂದ ಪಾರಾದರು ಎಂದು ಪ್ರತ್ಯಕ್ಷ‌ದರ್ಶಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *