Breaking News

ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಡಿ.ಕೆ.ಶಿವಕುಮಾರ್‌


ಬೆಂಗಳೂರು: ಧರ್ಮಸ್ಥಳ ಡಾ| ವೀರೇಂದ್ರ ಹೆಗ್ಗಡೆ ಅವರಿಗೂ ನನಗೂ ಮಂಜುನಾಥನಿಗೂ ಭಕ್ತರಿಗೂ ಇರುವ ಸಂಬಂಧದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಅಭಿನಂದಿಸಿ ಮಾತನಾಡಿದ ಅವರು, ಹೆಗ್ಗಡೆ ದೊಡ್ಡ ಕ್ಷೇತ್ರಕ್ಕೆ ಧರ್ಮಾಧಿಕಾರಿ ಆಗಿದ್ದಾರೆ. ‘ಮಾತು ತಪ್ಪದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ’ ಅಂತ ಮಾತಿದೆ. ಅವರನ್ನು ಕೇಂದ್ರ ಸರಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಅವರು ಮಾಡಿರುವ ಗ್ರಾಮೀಣ ಸೇವೆ ಅನನ್ಯ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಪ್ರಾಮಾಣಿಕತೆ ಯಿಂದ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ. ನಮ್ಮ ರಾಜ್ಯದಿಂದ ಅವರಿಗೆ ಅಭಿನಂದಿಸುತ್ತೇನೆ. ನನಗೆ ಬಹಳ ಸಂತೋಷ ತಂದಿದೆ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *