Breaking News

ಜಾತ್ಯತೀತತೆ ಯಾವುದೇ ಸರ್ಕಾರ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ : ವೆಂಕಯ್ಯ ನಾಯ್ಡು


ಬೆಂಗಳೂರು: ಜಾತ್ಯತೀತತೆ ಮತ್ತು ಇತರರ ನಂಬಿಕೆಗಳ ಬಗ್ಗೆ ಸಹಿಷ್ಣುತೆ ಹೊಂದಿರುವುದು ಭಾರತೀಯ ನೈತಿಕತೆಯ ಪ್ರಮುಖ ಸಾರವಾಗಿದೆ. ದೇಶದ ಪ್ರತಿಯೊಬ್ಬರಲ್ಲಿಯೂ ಜಾತ್ಯತೀತತೆ ಎಂಬುದು ರಕ್ತಗತವಾಗಿಯೇ ಬರುತ್ತದೆ. ಇದು ಯಾವುದೇ ಸರ್ಕಾರ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಮೌಂಟ್‌ ಕಾರ್ಮೆಲ್‌ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಂಸ್ಥೆಯ ವಜ್ರ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಭಾರತವು ಯಾವುದೇ ದೇಶಗಳ ಮೇಲೆ ದಾಳಿ ನಡೆಸದೆ ಸಹಿಷ್ಣುತಾ ಮನೋಭಾವದಿಂದ ಇರುವುದು ದೇಶದ ಹಿರಿಮೆ ಮತ್ತು ಶ್ರೀಮಂತಿಕೆಯಾಗಿದೆ. ಇದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ತೋರಿಸುತ್ತದೆ ಎಂದು ಹೇಳಿದರು.

ದೇಶದಲ್ಲಿ ಧರ್ಮ ಪ್ರತಿಯೊಬ್ಬರ ವೈಯಕ್ತಿಕ ವಿಚಾರವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ. ಯಾರೊಬ್ಬರು ತಮ್ಮ ಧರ್ಮದ ಬಗ್ಗೆ ಹೆಮ್ಮೆ ಪಡಬಹುದು ಮತ್ತು ಆಚರಣೆ ಮಾಡಬಹುದು. ಆದರೆ, ಇತರರ ಧಾರ್ಮಿಕ ನಂಬಿಕೆಗಳನ್ನು ಅವಹೇಳನ ಮಾಡುವ ಹಕ್ಕು ಯಾರಿಗೂ ಇಲ್ಲ. ಕೆಲವು ಘಟನೆಗಳು ದೇಶದ ಬಹುತ್ವ ಮತ್ತು ಒಳಗೊಳ್ಳುವಿಕೆಯ ಮೌಲ್ಯಗಳ ಬದ್ಧತೆಯನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *