Breaking News

ಲಂಕಾದ ಪ್ರಧಾನಿ ಮನೆಗೆ ಬೆಂಕಿ : ವಾಹನಗಳು ಜಖಂ


ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ರೊಚ್ಚಿಗೆದ್ದ ಜನ ದಂಗೆ ಎದ್ದಿದ್ದಾರೆ. ಇನ್ನು ಉದ್ರಿಕ್ತ ಗುಂಪೊಂದು ಲಂಕಾದ ಪ್ರಧಾನಿ ರನೀಲ್ ವಿಕ್ರಮಸಿಂಘೆ ಮನೆಗೆ ಬೆಂಕಿ ಹಚ್ಚಿ ವಾಹನಗಳನ್ನು ಜಖಂಗೊಳಿಸಿದೆ. ಇದರ ಬೆನ್ನಲ್ಲೇ ರನಿಲ್ ವಿಕ್ರಮಸಿಂಘೆ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಆ ಬಳಿಕ ಕೊಲಂಬೋದಲ್ಲಿರುವ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ಪ್ರತಿಭಟನಾ ನಿರತರು ಬೆಂಕಿ ಹಚ್ಚಿದ್ದು, ಪ್ರಧಾನಿಗೆ ಸೇರಿದ ವಾಹನಗಳನ್ನು ಪುಡಿಮಾಡಿದ್ದಾರೆ. ಲಂಕಾದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಸರ್ವ ಪಕ್ಷ ಸರ್ಕಾರಕ್ಕೆ ಅವಕಾಶ ನೀಡುವುದಾಗಿ ಘೋಷಿಸಿದ ವಿಕ್ರಮಸಂಘೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಆದರೆ ಹೊಸ ಸರ್ಕಾರ ರಚನೆಯಾಗುವವರೆಗೆ ವಿಕ್ರಮಸಿಂಘೆ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಬುಧವಾರ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *