Breaking News

ಭಾರಿ ಮಳೆಗೆ ತತ್ತರಿಸಿದ ಕರಾವಳಿ ಜನ


ಬೆಂಗಳೂರು: ಈಗಾಗಲೇ ಭಾರಿ ಮಳೆಗೆ ತತ್ತರಿಸಿರುವ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳವಾರದ ತನಕ ‘ಅತ್ಯಂತ ಭಾರಿ’ ಮಳೆಯ ‘ರೆಡ್‌ ಅಲರ್ಟ್‌’ (20 ಸೆಂ.ಮೀ ಗಿಂತ ಹೆಚ್ಚು ಮಳೆಯ ಸಂಭವ) ಘೋಷಿಸಲಾಗಿದೆ.

ಈ ಅವಧಿಯಲ್ಲಿ ಮಲೆನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗೆ ಭಾರಿ ಮಳೆಯ ‘ಆರೆಂಜ್‌ ಅಲರ್ಟ್‌’ ನೀಡಲಾಗಿದೆ. ಭಾನುವಾರ ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್‌ ಜಿಲ್ಲೆಗೆ ಸಾಧಾರಣದಿಂದ ಭಾರಿ ಮಳೆಯ ‘ಯೆಲ್ಲೋ ಅಲರ್ಟ್‌’ ಪ್ರಕಟಿಸಲಾಗಿದೆ. ಈ ಜಿಲ್ಲೆಗಳಲ್ಲಿ ಬೀದರ್‌ ಮತ್ತು ಕಲಬುರಗಿ ಹೊರತು ಪಡಿಸಿ ಉಳಿದೆಡೆ ಯೆಲ್ಲೋ ಅಲರ್ಚ್‌ ಮುಂದುವರಿಯಲಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *