ದಾವಣಗೆರೆ : ಮಾಜಿ ಮುಖ್ಯಮುಂತ್ರಿ ಸಿದ್ದರಾಮಯ್ಯ ಅವರಿಗೆ 75 ವರ್ಷಗಳು ಆಗಿರುವ ಹಿನ್ನೆಲೆಯಲ್ಲಿ ಅವರು ನಡೆದು ಬಂದ ದಾರಿ, ತೆಗೆದುಕೊಂಡ ಸಾರ್ವಜಿನಿಕ ನಿಲುವು, ಅಧಿಕಾರದಲ್ಲಿ ಇರುವಾಗ ಕೈಗೊಂಡ ಯೋಜನೆಗಳ ಬಗ್ಗೆ ಮೆಲುಕು ಹಾಕಲು ಅಮೃತಮಹೋತ್ಸವ ಕಾರ್ಯಕ್ರಮವನ್ನು ದಾವಣಗೆರೆಯಲ್ಲಿ ಆಗಸ್ಟ್ 3ರಂದು ಹಮ್ಮಿಕೊಳ್ಳಲಾಗಿದೆ.
ಅಮೃತ ಮಹೋತ್ಸವ ಸಮಿತಿ ಮತ್ತು ಸ್ವಾಗತ ಸಮಿತಿಯ ಸದಸ್ಯರು ಅದಕ್ಕಾಗಿ ಸ್ಥಳ ಪರಿಶೀಲನೆಯನ್ನು ಶನಿವಾರ ನಡೆಸಿದ್ದು, ಹಳೇ ಕುಂದವಾಡದಲ್ಲಿರುವ ಶಾಮನೂರು ಅರಮನೆ ಮೈದಾನವನ್ನು ಅಂತಿಮಗೊಳಿಸಲಾಗಿದೆ.
‘ಆಗಸ್ಟ್ 3ರಂದು ಮಧ್ಯಾಹ್ನ 12ಕ್ಕೆ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಹಿತ ಅನೇಕ ನಾಯಕರು ಭಾಗವಹಿಸಲಿದ್ದಾರೆ’ ಎಂದು ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್. ರಾಜಣ್ಣ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





