Breaking News

ದ್ರೌಪದಿ ಮುರ್ಮು ಇಂದು ರಾಜ್ಯಕ್ಕೆ ಭೇಟಿ


ಬೆಂಗಳೂರು: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಭಾನುವಾರ ರಾಜ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಶಾಸಕರು-ಸಂಸದರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ದ್ರೌಪದಿ ಮುರ್ಮು ಅವರಿಗೆ ಬಿಜೆಪಿ ಕರ್ನಾಟಕ ವತಿಯಿಂದ ಆತ್ಮೀಯ ಸ್ವಾಗತ ಕೋರಲು ಸಿದ್ಧತೆ ನಡೆಸಲಾಗಿದೆ.
ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಧರಿಸಲಾಗಿದೆ.

ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌ ಮಾರ್ಗದರ್ಶನದಲ್ಲಿ ಮುರ್ಮು ಸ್ವಾಗತಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಹಿಳಾ ಮೋರ್ಚಾ ವತಿಯಿಂದ 2,500 ಮಹಿಳೆಯರು ಶಾಂಗ್ರಿ ಲಾ ಹೋಟೆಲ್‌ ಬಳಿ ಸೇರಿ ಅವರನ್ನು ಸ್ವಾಗತಿಸಲು ತೀರ್ಮಾನಿಸಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *