Breaking News

ಶಿಂಜೋ ಅಬೆ ನಿಧನ : ತ್ರಿವರ್ಣ ಧ್ವಜವನ್ನು ಅರ್ಧಕ್ಕೆ ಹಾರಿಸಿ ಅಗೌರವ


ಜಪಾನ್‍ನ  ಮಾಜಿ ಪ್ರಧಾನ ಮಂತ್ರಿ  ಶಿಂಜೋ ಅಬೆ ಅವರನ್ನು ನಿನ್ನೆ ಗುಂಡಿಟ್ಟು ಕೊಲ್ಲಲಾಗಿದೆ. ಚುನಾವಣ ಪ್ರಚಾರದ ಭಾಷಣ ಮಾಡುತ್ತಿದ್ದಾಗಲೇ ಅಪರಿಚಿತ ವ್ಯಕ್ತಿಯೊಬ್ಬ ಶಿಂಜೋ ಅಬೆ ಮೇಲೆ ಗುಂಡು ಹಾರಿಸಿದ್ದ.

ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋದ್ರು, ಚಿಕಿತ್ಸೆ ಫಲಕಾರಿಯಾಗದೇ ಶಿಂಜೋ ಅಬೆ ಮೃತಪಟ್ಟರು. ಶಿಂಜೋ ಅಬೆ ಹತ್ಯೆ ಸುದ್ದಿ ಕೇಳುತ್ತಿದ್ದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ತೀವ್ರ ವಿಷಾದ ವ್ಯಕ್ತಪಡಿಸಿದ್ರು. ಆತ್ಮೀಯ ಸ್ನೇಹಿತ ಶಿಂಜೋ ಅಬೆ ನಿಧನದಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಎಂದು ತಮ್ಮ ಬ್ಲಾಗ್‍ನಲ್ಲಿ ನರೆದುಕೊಂಡಿದ್ರು. ಶಿಂಜೋ ಅಬೆ ಅವರ ಗೌರವಾರ್ಥವಾಗಿ ಭಾರತದಲ್ಲಿ ಒಂದು ದಿನ ಶೋಕಾಚರಣೆ ಘೋಷಿಸಲಾಗಿತ್ತು. ಅಂತೆಯೇ ಇಂದು ಕೆಂಪು ಕೋಟೆ, ರಾಷ್ಟ್ರಪತಿ ಭವನ ಮತ್ತು ಸಂಸತ್ ಭವನದಲ್ಲಿ ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಅರ್ಧಕ್ಕೆ ಹಾರಿಸಿ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗೌರವ ಸಲ್ಲಿಸಲಾಯ್ತು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *