ಬೆಂಗಳೂರು; ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ಚಿತ್ರದಲ್ಲಿ ನಟಿಸಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಮಲಯಾಳ, ತೆಲುಗು, ಕನ್ನಡ, ತಮಿಳು ಚಿತ್ರಗಳಲ್ಲಿ ನಟಿಸಿರುವ ಪ್ರಿಯಾ ಆನಂದ್, ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅದರಲ್ಲಿ ಮದುವೆ ಅಂತೂ ಆದರೆ ನಿತ್ಯಾನಂದರನ್ನೇ ಮದುವೆಯಾಗುತ್ತೇನೆ ಎಂದಿದ್ದಾರೆ.
ನಿತ್ಯಾನಂದ ಸ್ವಾಮೀಜಿ ಅಂದರೆ ನನಗೆ ತುಂಬಾ ಇಷ್ಟ. ಅವರಲ್ಲಿ ಏನೋ ಒಂದು ವಿಶೇಷತೆ ಇದೆ. ಆದ್ದರಿಂದ ಅವರನ್ನು ಎಲ್ಲರೂ ಇಷ್ಟಪಡುತ್ತಾರೆ. ನಾನು ಮದುವೆ ಅಂತ ಆದರೆ ನಿತ್ಯಾನಂದ ಸ್ವಾಮಿಯನ್ನೇ ಆಗಬೇಕು ಅನ್ನೋ ಅಸೆ ಇದೆ ಎಂದು ಪ್ರಿಯಾ ಆನಂದ್ ಹೇಳಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





