ಮಂಡ್ಯ : ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಜಮೀನಿಗೆ ನುಗ್ಗಿರುವ ಘಟನೆ ಜಿಲ್ಲೆಯ ದುದ್ದ ಗ್ರಾಮದ ಬಳಿ ನಡೆದಿದೆ.
ಮೇಲುಕೋಟೆಯಿಂದ ಮಂಡ್ಯಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಟ್ರಾಕ್ಟರ್ ಅನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಏಕಾಏಕಿ ಅಡ್ಡಬಂದ ಟ್ರ್ಯಾಕ್ಟರ್ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದೆ.
ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಶಿವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





