ಬೆಂಗಳೂರು: ಎನ್‌ಡಿಎ ಬೆಂಬಲಿತ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ದ್ರೌಪದಿ ಮುರ್ಮು ಜು.10ರಂದು ಬೆಂಗಳೂರಿಗೆ ಭೇಟಿ ನೀಡಿದ್ದು, ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಜೆಡಿಎಸ್ ಬೆಂಬಲ ಕೋರಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಬಂದಿದ್ದ ದ್ರೌಪದಿ ಮುರ್ಮು ಅವರು ಕೆಲ ಕಾಲ ಮಾತುಕತೆ ನಡೆಸಿ ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಹ ಇದ್ದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತರರ ಜತೆ ಮಾತುಕತೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಹಾಜರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





