ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಕಾರ್ಯದರ್ಶಿಯು ಶಿವಸೇನಾದ 53 ಶಾಸಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಇವರಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ 39 ಶಾಸಕರು, ಉದ್ಧವ್ ಠಾಕ್ರೆ ಬಣದ 14 ಶಾಸಕರು ಸೇರಿದ್ದಾರೆ.
ಉದ್ಧವ್ ಠಾಕ್ರೆ ಬಣದಲ್ಲಿದ್ದ ಶಾಸಕ ಸಂತೋಷ್ ಬಂಗಾರ್, ಕೊನೆಕ್ಷಣದಲ್ಲಿ ಶಿಂಧೆ ಬಣವನ್ನು ಸೇರಿಕೊಂಡಿದ್ದರು.
ನೋಟಿಸ್ ಜಾರಿಯಾಗಿರುವುದನ್ನು ಉಭಯ ಬಣಗಳು ದೃಢಪಡಿಸಿವೆ. ಮಹಾರಾಷ್ಟ್ರ ವಿಧಾನಸಭೆ (ಪಕ್ಷಾಂತರಕ್ಕಾಗಿ ಅನರ್ಹತೆ) ನಿಯಮಗಳ ಅನುಸಾರ ನೋಟಿಸ್ ಜಾರಿಗೊಳಿಸಲಾಗಿದೆ.
ವಿಶ್ವಾಸಮತ ಕೋರುವ ಸಂದರ್ಭದಲ್ಲಿ ಪಕ್ಷದ ವಿಪ್ ಅನ್ನು ಉಲ್ಲಂಘಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ನೇತೃತ್ವದ ಉಭಯ ಬಣಗಳು ಪರಸ್ಪರರ ವಿರುದ್ಧ ಆರೋಪ ಮಾಡಿದ್ದವು. ಅಲ್ಲದೆ, ಇದೇ ಲೋಪಕ್ಕಾಗಿ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸಬೇಕು ಎಂದು ಮನವಿ ಮಾಡಿದ್ದವು.
bigtvnews | Hubli Dharwad News | Kannada News | Karnataka News Hubli News | News In Hubli | Local news





