Breaking News

ಕರಾವಳಿ ಮತ್ತು ಮಲೆನಾಡಿನಲ್ಲಿ ಭರ್ಜರಿ ಮಳೆ


ಬೆಂಗಳೂರು: ಕಳೆದೊಂದು ವಾರದಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಭರ್ಜರಿಯಾಗಿ ಸುರಿಯುತ್ತಿರುವ ಮಳೆ ಸೋಮವಾರ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆವರಿಸಿಕೊಳ್ಳಲಿದೆ. ಬೀದರ್‌, ಕಲಬುರಗಿ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು (11 ರಿಂದ 20 ಸೆಂ.ಮೀ) ‘ಆರೆಂಜ್‌ ಅಲರ್ಟ್‌’ ನೀಡಲಾಗಿದೆ.

ಬುಧವಾರದವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ‘ಅತಿ ಭಾರಿ ಮಳೆ’ಯಾಗಲಿರುವುದರಿಂದ (20 ಸೆಂ.ಮೀಗೂ ಹೆಚ್ಚು) ‘ರೆಡ್‌ ಅಲರ್ಟ್‌’ ಮುಂದುವರೆಸಲಾಗಿದೆ.

ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲೂಈ ಮಳೆ ಮುಂದುವರಿಯಲಿದೆ. ಹಾಸನ ಮತ್ತು ಮೈಸೂರು ಜಿಲ್ಲೆಗೆ ‘ಯೆಲ್ಲೋ ಅಲರ್ಚ್‌’ ಇರಲಿದೆ. ಮಂಗಳವಾರ ಮಳೆ ಅಬ್ಬರ ತುಸು ಕಡಿಮೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಲೆನಾಡಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಇರಲಿದೆ. ಇದೇ ವೇಳೆ ಉತ್ತರ ಒಳನಾಡಿನಲ್ಲಿ ಮಳೆ ಇನ್ನಷ್ಟು ವ್ಯಾಪಕವಾಗಲಿದ್ದು ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ದಕ್ಷಿಣ ಒಳನಾಡಿನ ಮೈಸೂರು ಮತ್ತು ಹಾಸನ ಜಿಲ್ಲೆಗೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಬುಧವಾರ ಮಲೆನಾಡು ಮತ್ತು ಮಲೆನಾಡಿನ ತಪ್ಪಲಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಇರಲಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *