Breaking News

ಉದ್ಯಮಿಗೆ ಬೆದರಿಕೆ ಹಾಕಿದ್ದ ರೌಡಿಶೀಟರ್ ಸಿಸಿಬಿ ಪೊಲೀಸರ ವಶಕ್ಕೆ : ಇನ್ಸ್ಪೆಕ್ಟರ್‌‌ , ಸಬ್ ಇನ್ಸ್ಪೆಕ್ಟರ್ ಅಮಾನತು


ಬೆಂಗಳೂರು: ಕಲಾಸಿಪಾಳ್ಯ ಉದ್ಯಮಿಗೆ ಬೆದರಿಕೆ ಹಾಕಿದ್ದ ರೌಡಿಶೀಟರ್ ರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಉದ್ಯಮಿಗೆ ಬೆದರಿಕೆ ಹಾಕಿದ್ದ ವಿಚಾರದಲ್ಲಿ ಪ್ರಕರಣ ದಾಖಲಿಸದಿದ್ದ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಅಮಾನತು ಮಾಡಿದ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಬಾಂಬೆ ಸಲೀಂ ಎಂಬಾತನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾರೆಂಟ್ ಮೇಲೆ ಕರೆದುತಂದು ಸಲೀಂನನ್ನು ವಿಚಾರಣೆ ನಡೆಸುತ್ತಿದ್ದಾರೆ. ತನ್ನ ಸಹಚರರ ಮೂಲಕ ಉದ್ಯಮಿಗೆ ಬೆದರಿಕೆ ಹಾಕುತ್ತಿದ್ದನು. ದೊಡ್ಡ ದೊಡ್ಡ ಬಿಸಿನೆಸ್ ಉದ್ಯಮಿಗಳಿಗೆ, ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬೆದರಿಕೆ ಹಾಕುತ್ತಿದ್ದ.

ಧಾರವಾಡ ಜೈಲ್ಲಿನಲ್ಲಿದ್ದು ಉದ್ಯಮಿಗಳಿಗೆ ಸಹಚರರ ಮೂಲಕ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಕಲಾಸಿಪಾಳ್ಯ ಉದ್ಯಮಿ ಮುಯಿಝಗೆ ರೌಡಿಶೀಟರ್ ಬಾಂಬೆ ಸಲೀಂ ಬೆದರಿಕೆ ಹಾಕಿದ್ದನು. ತನ್ನ ಸಹಚರರನ್ನ ಮುಯಿಝ ಮನೆ ಕಳಿಸಿ ಬಳಿ ಜೀವ ಬೆದರಿಕೆ ಹಾಕಿದ್ದ. ಈ ವಿಚಾರವಾಗಿ ಬಾಂಬೆ ಸಲೀಂರನ್ನ ಬೆಂಗಳೂರು ಸಿಸಿಬಿ ಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಉದ್ಯಮಿಗೆ ಬೆದರಿಕೆ ಸೇರಿ ಹಲವು ಹಳೆ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *