Breaking News

ಬಿ.ಸಿ ನಾಗೇಶ್ ವಜಾಗೊಳಿಸುವಂತೆ ಪ್ರಧಾನಿಗೆ ಆಗ್ರಹ


ಬೆಂಗಳೂರು: ರಾಜ್ಯದಲ್ಲಿ  ಪಠ್ಯಪುಸ್ತಕ ಪರಿಷ್ಕರಣಾ ವಿಚಾರ ಸೇರಿದಂತೆ ಶಿಕ್ಷಣ ಇಲಾಖೆಯ ಸಾಲು ಸಾಲು ಆಡಳಿತ ವೈಫಲ್ಯಗಳ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ವಜಾಗೊಳಿಸುವಂತೆ ಸೂಚಿಸಬೇಕು ಎಂದು ರುಪ್ಸಾ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದೆ.

ಈ ಬಗ್ಗೆ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ( ರುಪ್ಸಾ ಕರ್ನಾಟಕ ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ರಾಜ್ಯದ ಪ್ರತಿ ಮಗುವಿಗೂ ಕಡ್ಡಾಯವಾಗಿ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಆದ್ರೇ ಕರ್ನಾಟಕದಲ್ಲಿ ಇದರ ಕನಿಷ್ಠ ಜ್ಞಾನವೂ ಇಲ್ಲದ ಪಕ್ಕಾ ವ್ಯಾಪಾರಿ ಮನೋಭಾವನದ ವ್ಯಕ್ತಿ ಮಂತ್ರಿಯಾಗಿರುವ ಹಿನ್ನಲೆಯಲ್ಲಿ, ಇದು ಈಡೇರುತ್ತಿಲ್ಲ. ಈ ಹಿನ್ನಲೆಯಲ್ಲಿ ಅವರನ್ನು ವಜಾ ಮಾಡುವಂತೆ ಸಿಎಂ ಬೊಮ್ಮಾಯಿಗೆ ಸೂಚಿಸಬೇಕು ಎಂದು ಕೋರಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *