ಹುಬ್ಬಳ್ಳಿ: ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಗರದಲ್ಲಿರುವ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಇಂದು ಚುನಾವಣೆ ನಡೆಯುತ್ತಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಬೆಳಿಗ್ಗೆ 10.30ರಿಂದ ನಾಮಪತ್ರಗಳ ಸಲ್ಲಿಕೆ ಆರಂಭವಾಗಿದೆ. ಮಧ್ಯಾಹ್ನ ರವರೆಗೆ ನಾಮಪತ್ರಗಳ ಪರಿಶೀಲನೆ ಹಾಗೂ ಉಮೇದುವಾರಿಕೆ ಹಿಂತೆಗೆದುಕೊಳ್ಳುವಿಕೆ ನಡೆಯಲಿದೆ. ಚುನಾವಣೆ ಬದಲು ಹೊಂದಾಣಿಕೆ ಮೂಲಕವೇ ಸದಸ್ಯರ ಆಯ್ಕೆ ನಡೆಯಲಿದ್ದು, ಮಧ್ಯಾಹ್ನದ ಹೊತ್ತಿಗೆ ಅಂತಿಮ ಫಲಿತಾಂಶ ಹೊರಬೀಳಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





