ಮೈಸೂರು: ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಿದ್ದು, ಬಸ್ ಗಳಲ್ಲಿ ಬೆಟ್ಟಕ್ಕೆ ಹೋಗಿ ಬರಲು ಅವಕಾಶ ಕಲ್ಪಿಸಲಾಗಿದೆ.
ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನೀಡಲಾಗಿದ್ದ ಪಾಸ್ ರದ್ದುಪಡಿಸಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಭಕ್ತರು ಬೆಟ್ಟಕ್ಕೆ ತೆರಳಲು ಉಚಿತ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಖಾಸಗಿ ವಾಹನಗಳಿಗೆ ನೀಡಿದ ಪಾಸ್ ರದ್ದುಪಡಿಸಲಾಗಿದೆ ಎಂದು ಹೇಳಲಾಗಿದೆ.
ಕಳೆದ ವಾರ ಪಾಸ್ ನಿಂದಾಗಿ ಗೊಂದಲ ಸೃಷ್ಟಿಯಾಗಿತ್ತು. ಮುಂದಿನ ವಾರದಿಂದ ಯಾವುದೇ ಪಾಸ್ ನೀಡದಿರಲು ನಿರ್ಧರಿಸಲಾಗಿದೆ. ಜುಲೈ 15 ಮತ್ತು 22 ರಂದು ಆಷಾಢ ಶುಕ್ರವಾರ ದಿನಗಳಂದು ಯಾವುದೇ ಪಾಸ್ ನೀಡದಿರಲು ನಿರ್ಧರಿಸಲಾಗಿದೆ. ಜುಲೈ 20ರಂದು ವರ್ಧಂತಿಗೂ ಪಾಸ್ ಕೊಡದಿರಲು ನಿರ್ಧರಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರು ಬಸ್ ನಲ್ಲಿಯೇ ತೆರಳುವಂತೆ ಸೂಚನೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





