ಚಾಮರಾಜನಗರ: ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ತಾವು ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ ಆಗುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಇದೇ ವೇಳೆ ಸಿದ್ದರಾಮೋತ್ಸವದ ಬಗ್ಗೆ ಪ್ರಸ್ತಾಪಿಸಿದ ಸಚಿವ ಶ್ರೀರಾಮುಲು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಉತ್ಸವ ಮೂರ್ತಿಗೆ ಹೋಲಿಸಿ ವ್ಯಂಗ್ಯ ಮಾಡಿದರು.
ಚಾಮರಾಜನಗರ ಅಜಿಲ್ಲೆಯ ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು ಮೀಸಲಾತಿ ಹೆಚ್ಚಳ ಮಾಡುವ ಪ್ರಕ್ರಿಯೆ ಕಾನೂನು ತೊಡಕು ಹಾಗು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ, ಇದೆಲ್ಲವನ್ನೂ ಸರಿಪಡಿಸಿ ಆದಷ್ಟು ಶೀಘ್ರದಲ್ಲೇ ಸಿಹಿ ಸುದ್ದಿ ಕೊಡುತ್ತೇವೆ ಎಂದರು.
ಎಸ್ಟಿ ಸಮುದಾಯಕ್ಕೆ ಹಾಲಿ ಇರುವ 3% ಮೀಸಲಾತಿಯನ್ನು 7.5% ಗೆ ಹಾಗು ಎಸ್ಸಿ ಸಮುದಾಯಕ್ಕೆ ಇರುವ 15% ಮೀಸಲಾತಿಯನ್ನು 17% ಗೆ ಹೆಚ್ಚಳ ಮಾಡಬೇಕೆಂಬುದು ಬಹುದಿನದ ಬೇಡಿಕೆಯಾಗಿದೆ. ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಹೆಚ್ಚಳ ಮಾಡಲು ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗ ಶಿಫಾರಸ್ಸು ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





